ಕರಾವಳಿ

ಕಡಬ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು, ಚಾಲಕನಿಗೆ ಗಾಯ

ಕಡಬ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೀರಾಜೆ ಕ್ರಾಸ್ ಬಳಿ ಬುಧವಾರ ರಾತ್ರಿ ನಡೆದಿದೆ. ಗಾಯಗೊಂಡ ಚಾಲಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಎಂದು ಗುರುತಿಸಲಾಗಿದೆ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ ಬದಿಗೆ ಬಿದ್ದಿದೆ. ಘಟನೆಯಲ್ಲಿ ಕುಶಾಲಪ್ಪರ ತಲೆಗೆ ಗಾಯಗಳಾಗಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ.

Related posts

ನೀವು ಚಿಕನ್, ಮಟನ್​ ‘ಲಿವರ್’​ ಪ್ರಿಯರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರ್ಲಿ..

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವಿಶೇಷ ಪೂಜೆ

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್‌ ರೈ ಮನವಿ