ಮಂಗಳೂರು: ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಅಕ್ಟೋಬರ್ 1ರಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೂ ಮುನ್ನ ಅಲ್ಲಿನ ಪ್ರದೇಶವನ್ನು ಕುಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದರು.