ಕರಾವಳಿಕ್ರೈಂವೈರಲ್ ನ್ಯೂಸ್

ಕಡಬ: ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..! ಮೂವರು ವಿದ್ಯಾರ್ಥಿನಿಯರು ಗಂಭೀರ..!

184

ನ್ಯೂಸ್ ನಾಟೌಟ್: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 4 ರಂದು ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಓರ್ವ ಆರೋಪಿಯನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದು, ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

See also  ಸುಳ್ಯ:ಬಿಳಿಯಾರಿಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು
  Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget