ಕ್ರೈಂ

ಕಡಬ: ನೀರಿನಲ್ಲಿ ಕೊಚ್ಚಿ ಹೋದ ಯುವಕನ ಶೋಧ ಕಾರ್ಯ ಸ್ಥಗಿತ

246
Spread the love

ಕಡಬ: ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಕಡಬದ ಯುವಕನ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ 19 ವರ್ಷದ ಶಫೀಕ್‌ ಅನ್ನುವ ಯುವಕ ನೀರು ಪಾಲಾಗಿದ್ದರು. ಅಗ್ನಿ ಶಾಮಕ ಸಿಬ್ಬಂದಿ, ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಯುವಕನ ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ ರಾತ್ರಿಯಾದರೂ ಶಫೀಕ್‌ ಸುಳಿವು ಸಿಕ್ಕಿಲ್ಲ. ಸದ್ಯ ನದಿ ನೀರು ರಭಸದಿಂದ ಹರಿಯುತ್ತಿದೆ. ಹೀಗಾಗಿ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಮತ್ತೆ ಶೋಧ ಕಾರ್ಯ ನಡೆಸುವ ಸಾಧ್ಯತೆ ಇದೆ.

See also  ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 300 ಜನರ ವಿರುದ್ಧ ಎಫ್‌.ಐ.ಆರ್..! ಪ್ರಾಂಶುಪಾಲರು, ತರಗತಿ ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ ಅಮಾನತ್ತು.!
  Ad Widget   Ad Widget   Ad Widget