ಕಡಬ: ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಕಡಬದ ಯುವಕನ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ 19 ವರ್ಷದ ಶಫೀಕ್ ಅನ್ನುವ ಯುವಕ ನೀರು ಪಾಲಾಗಿದ್ದರು. ಅಗ್ನಿ ಶಾಮಕ ಸಿಬ್ಬಂದಿ, ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಯುವಕನ ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ ರಾತ್ರಿಯಾದರೂ ಶಫೀಕ್ ಸುಳಿವು ಸಿಕ್ಕಿಲ್ಲ. ಸದ್ಯ ನದಿ ನೀರು ರಭಸದಿಂದ ಹರಿಯುತ್ತಿದೆ. ಹೀಗಾಗಿ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಮತ್ತೆ ಶೋಧ ಕಾರ್ಯ ನಡೆಸುವ ಸಾಧ್ಯತೆ ಇದೆ.