Latestಕರಾವಳಿ

ಕಡಬ: ಬೈಕ್ ಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್ ; ಸವಾರ ದಾರುಣ ಅಂತ್ಯ

871

ನ್ಯೂಸ್‌ ನಾಟೌಟ್:ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಸೋಮವಾರ ರಾತ್ರಿ (ಮೇ 26) ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ.ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ.

ಆಗಿದ್ದೇನು?

ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದ, ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದ. ಆಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಮ್ನಿ ಕಾರೊಂದನ್ನು ಹಿಂದಿಕ್ಕಿ ಹೋಗುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.  ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಕಡಬ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹಾದಿ ಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ತಿಲಿದು ಬಂದಿದೆ.ಇದೇ ವೇಳೆ ಒಮ್ನಿ ಕಾರು ಕೂಡ ಜಖಂಗೊಂಡಿದೆ.ಮೃತ ಯುವಕನಿಗೆ ತಾಯಿ, ಸಹೋದರ ಹಾಗೂ ಸಹೋದರಿ ಇದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿಗೆ 13 ಭಾರತೀಯ ನಾಗರಿಕರು ಸಾವು..! ನೂರಾರು ಗಡಿ ನಿವಾಸಿಗಳು ಭೂಗತ ಬಂಕರ್‌ ಗಳಲ್ಲಿ ವಾಸ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget