ಕಡಬ: ಇಲ್ಲಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬಿಸಿ ಊಟದ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿಕೊಂಡ ಘಟನೆ ನಡೆದಿದೆ. ಹಠಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಪೈಪ್ ನಲ್ಲಿ ಸೋರಿಕೆಯಾಗಿದೆ. ಅಡುಗೆ ಮಾಡುವುದಕ್ಕಾಗಿ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಹಠಾತ್ ಬೆಂಕಿ ಆವರಿಸಿಕೊಂಡಿದೆ. ತಕ್ಷಣ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಮಕ್ಕಳು ಬಚಾವ್ ಆಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಹಾಗೂ ಸ್ಥಳೀಯ ಮುಖಂಡರು ಆಗಮಿಸಿದ್ದಾರೆ.