ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೆಲ ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ. ಒಂದೇ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಇರುವುದಾಗಿ ವರದಿ ತಿಳಿಸಿದೆ.
ಆರೋಗ್ಯ ಇಲಾಖೆಯಿಂದ ದೊರೆತ ಮಾಹಿತಿ ಅನ್ವಯ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು, ಲಾವತ್ತಡ್ಕದಲ್ಲಿ ಒಂದು, ಗೋಳಿತ್ತೊಟ್ಟುವಿನಲ್ಲಿ ಒಂದು, ಕುಕ್ಕೆ ಸುಬ್ರಹ್ಮಣ್ಯ ಶಾಲೆಯ 6 ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ ಎನ್ನಲಾಗಿದೆ.
Click
ಕಳ್ಳನಿಗೆ ವಿಶೇಷ ಷರತ್ತಿನ ಮೇಲೆ ಜಾಮೀನು ಮಂಜೂರು..! 200 ಗಿಡ ನೆಟ್ಟು ಪೋಷಿಸಲು ಸೂಚನೆ
ಹಿಂದೂ ವಿದ್ಯಾರ್ಥಿ ಕೈಗೆ ಕಟ್ಟಿದ ದಾರವನ್ನು ಕತ್ತರಿಸಿದ ದಕ್ಷಿಣ ಆಫ್ರಿಕಾದ ಶಿಕ್ಷಕ..! ಹಿಂದೂ ಮಹಾಸಭಾ ಆಕ್ರೋಶ..!
ಮಂಗಳೂರು: ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ವಾಕಿಟಾಕಿ ಕಳವು..! ಪ್ರಕರಣ ದಾಖಲು
ಫೆ.12ರಿಂದ ಪ್ರಧಾನಿ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸ, ನೂತನ ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ