ಕರಾವಳಿ

ಕದ್ರಿ ದೇವಸ್ಥಾನಕ್ಕೆ ರಕ್ಷಣೆ ಒದಗಿಸಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ವಿಶ್ವ ಹಿಂದೂ ಪರಿಷತ್

ನ್ಯೂಸ್ ನಾಟೌಟ್ : ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.

ದೇವಸ್ಥಾನದ ಒಳಕ್ಕೆ ಅನ್ಯಕೋಮಿನ ವ್ಯಕ್ತಿಗಳು ನುಗ್ಗಿದ್ದು ಇದೀಗ ತನಿಖೆ ನಡೆಯುತ್ತಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಲಾಗಿತ್ತು. ಈ ಹಿಂದೆ ಉಗ್ರ ಶಾರಿಖ್ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು ದೊಡ್ಡ ವಿವಾದವಾಗಿತ್ತು. ಇದೀಗ ಈ ಯುವಕರು ಕೂಡ ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ನಡೆಸಬೇಕು , ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರಿಗೆ ಮನವಿ ನೀಡಿದ್ದು, ಕದ್ರಿ ದೇವಸ್ಥಾನಕ್ಕೆ ಶಾಶ್ವತ ಪೋಲಿಸ್ ಸಿಬ್ಬಂದಿ ನೀಡಿ ಸೂಕ್ತ ಭದ್ರತೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಆಗ್ರಹಿಸಲಾಗಿದೆ.

Related posts

ವಿರಾಜಪೇಟೆ:ಅತ್ತೆ ಮೇಲೆಯೇ ಅಳಿಯನಿಂದ ಹ*ಲ್ಲೆ,ಘಟನೆಗೆ ಕಾರಣವೇನು?

ಕಾರ್ಕಳ:ಕಾಂಗ್ರೆಸ್ ಅಭ್ಯರ್ಥಿ ಅನುಯಾಯಿಗಳಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪ,ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಿ-ಬಿಜೆಪಿ ಒತ್ತಾಯ

ಅಪರಿಚಿತ ವ್ಯಕ್ತಿಯ ವಿಡಿಯೋ ಕರೆಯನ್ನು ನಂಬಿ 16 ಲಕ್ಷ ರೂ. ಕಳೆದುಕೊಂಡ ಪುತ್ತೂರಿನ ವೈದ್ಯರು!!,ವೈದ್ಯರಿಗೆ ಪಂಗನಾಮ ಹಾಕಿದ ಆ ಖತರ್ನಾಕ್ ವಂಚಕರು ಯಾರು? ಏನಿದು ಮೋಸದ ಜಾಲ?