ರಾಜಕೀಯ

ಕಾಲಭೈರವನಿಗೆ ವಿಶೇಷ ಪೂಜೆ ನೆರವೇರಿಸಿದ ನೂತನ ಡಿಸಿಎಂ ಡಿಕೆ ಶಿವಕುಮಾರ್! ಡಿಸಿಎಂ ಆದ ಬಳಿಕ ಆದಿಚುಂಚನಗಿರಿ ಮಠಕ್ಕೆ ಮೊದಲ ಭೇಟಿ

134

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಡಿ ಕೆ ಶಿವಕುಮಾರ್ ಅವರಿಗೆ ಪೂರ್ಣಕುಂಭ ಸಹಿತ ಅದ್ಧೂರಿ ಮೆರವಣಿಗೆ ಮೂಲಕ ಮಠದ ಆಡಳಿತ ಮಂಡಳಿಯಿಂದ ಭವ್ಯ ಸ್ವಾಗತ ಕೋರಿದರು.

ಬಳಿಕ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಈ ವೇಳೆ ಕಾಲ ಭೈರವನ ದರ್ಶನ ಪಡೆದು ಡಿ ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನಿರ್ಮಲಾನಂದನಾಥ ಸ್ವಾಮೀಜಿ ಅವರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಹಾಗೂ ನೂತನ‌ ಉಪಮುಖ್ಯಮಂತ್ರಿಗೆ ಕೆಲವೊಂದಿಷ್ಟು ಸಲಹೆ ಸೂಚನೆ ನೀಡಿದರು. ಸಿಎಂ ಪಟ್ಟ ಕೈತಪ್ಪಿದ ಬಗ್ಗೆಯೂ ಡಿ ಕೆ ಶಿ ಬಳಿ ಸ್ವಾಮೀಜಿ ಮಾಹಿತಿ ಪಡೆದರು ಎಂದು ವರದಿ ತಿಳಿಸಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಭಕ್ತ, ಭಗವಂತನಿಗೆ ಕೈ ಮುಗಿಯಲು ಬಂದಿದ್ದೇನೆ. ನಾನು ಈ ಹಿಂದೆ ಹೇಳಿದ್ದೇನೆ. ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು. ಎಲ್ಲ ಸಮಾಜದವರಿಗೆ ಅವರದ್ದೇ ಅದ ನಂಬಿಕೆ ಇರುತ್ತೆ ಎಂದರು.

See also  ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣದ ಬಗ್ಗೆ ಮಹಿಳಾ ಆಯೋಗ ಹೇಳಿದ್ದೇನು? ಇದಕ್ಕೆ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಹೇಗಿತ್ತು..?
  Ad Widget   Ad Widget   Ad Widget   Ad Widget   Ad Widget   Ad Widget