ಕೊಡಗು

ಕಳಗಿ ಬಾಲಚಂದ್ರ ಕೊಲೆ ಆರೋಪಿಗಳಿಗೆ ಶಿಕ್ಷೆ ಪ್ರಕಟ, ಜೀವಾವಧಿ + ದಂಡ ಕಟ್ಟಲು ಆದೇಶ

71
Spread the love

ನ್ಯೂಸ್ ನಾಟೌಟ್: ಬಿಜೆಪಿ ಮುಖಂಡ ಕಳಗಿ ಬಾಲಚಂದ್ರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2019 ಮಾರ್ಚ್‌ 19 ರಂದು ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಅವರ ಹತ್ಯೆ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ಎ1 ಆರೋಪಿಯಾಗಿದ್ದ ಸಂಪತ್ ಅನ್ನುವಾತ ಹತ್ಯೆಗೊಳಗಾಗಿದ್ದ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಎ2 ಆರೋಪಿ ಹರಿ ಪ್ರಸಾದ್ ಹಾಗೂ ಎ3 ಆರೋಪಿ ಜಯನ್ ಎಂಬುವವರು ಮಡಿಕೇರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಅಕ್ಟೋಬರ್ 16ರಂದು ಈ ಪ್ರಕರಣದ ವಿಚಾರಣೆಯನ್ನು 1ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಧೀಶೆ ಪ್ರಶಾಂತಿ ಜಿ. ಕೂಲಂಕುಷವಾಗಿ ವಿಚಾರಣೆ ನಡೆಸಿದರು. ತೀರ್ಪನ್ನು ಅಕ್ಟೋಬರ್ -19ಕ್ಕೆ ಕಾಯ್ದಿರಿಸಿದ್ದರು. ಸೆಕ್ಷನ್ 120B, 302, 201 R/w sec 34 ಐಪಿಸಿ ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.

See also  ಮಡಿಕೇರಿ:ಹಾಡಹಗಲಿನಲ್ಲಿಯೇ ರಸ್ತೆಯಲ್ಲೇ ಸಂಚರಿಸುತ್ತಿರುವ ಕಾಡಾನೆಗಳು,ಕಾಡಿಗೆ ಓಡಿಸಿದರೂ ರಸ್ತೆಯತ್ತ ಹೆಜ್ಜೆಯಿಡುತ್ತಿರುವ ಸಲಗ!
  Ad Widget   Ad Widget   Ad Widget   Ad Widget   Ad Widget   Ad Widget