ಕರಾವಳಿ

ಕಳಂಜ: ಅಡುಗೆ ಮಾಡುತ್ತಿದ್ದ ಮಹಿಳೆಗೆ ಬೆಂಕಿ ತಗುಲಿ ಸಾವು

608

ನ್ಯೂಸ್ ನಾಟೌಟ್: ಅಡುಗೆ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಮಹಿಳೆಯೊಬ್ಬರಿಗೆ ಬೆಂಕಿ ತಗುಲಿ ಮೃತಪಟ್ಟಿರುವ ಘಟನೆ ಜುಲೈ 20ರಂದು  ಬೆಳಗ್ಗೆ ಕಳಂಜದಲ್ಲಿ ನಡೆದಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಕಳಂಜ ಗ್ರಾಮದ ಬಾಳೆ ಗುಡ್ಡೆಕುಂಞಣ್ಣನಾಯ್ಕರ ಪುತ್ರಿ ಕುಸುಮಾ ಎಂಬುವವರು ಎಂದಿನಂತೆ ಬೆಳಗ್ಗೆ ಎದ್ದು ಅಡುಗೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಕುಸುಮಾ ಗಂಭೀರ ಗಾಯಗೊಂಡರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಮೂರು ದಿನಗಳ ಚಿಕಿತ್ಸೆ ನೀಡಿದರೂ ಅದು ಫಲಕಾರಿಯಾಗದೆ ಸಾವಿಗೀಡಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 41 ವರ್ಷ ವಯಸ್ಸಾಗಿತ್ತು. ಮೃತರು ತಂದೆ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು (ಭಾನುವಾರ)ಸ್ವಗೃಹದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

See also  ಪುತ್ತೂರು: ನನ್ನ ಕ್ಷೇತ್ರದಲ್ಲಿ ಅನ್ಯಾಯ ಆದವರಿಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ,ಬೆಳ್ತಂಗಡಿ ಶಾಸಕರು ಇಲ್ಲಿಗೆ ಬಂದು ಮಾತನಾಡುವ ಅಗತ್ಯವಿಲ್ಲ-ಶಾಸಕ ಅಶೋಕ್ ರೈ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget