ಕರಾವಳಿ

ಕಲ್ಲುಗುಂಡಿ: ಬೈಕ್‌-ಸ್ಕೂಟಿ ಡಿಕ್ಕಿ, ಎಸ್ ಡಿಎಂಸಿ ಅಧ್ಯಕ್ಷರಿಗೆ ಗಾಯ

476

ನ್ಯೂಸ್ ನಾಟೌಟ್ : ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಬೈಕ್ ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಮಧುಸೂದನ್ ಎಂಬುವವರ ಸೊಂಟಕ್ಕೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಮಧುಸೂದನ್ ಅವರು ಕಲ್ಲುಗುಂಡಿ ಸರಕಾರಿ ಪ್ರಾಥಮಿಕ ಶಾಲೆಯ ಎಸ್ ಡಿಎಂ ಸಿ ಅಧ್ಯಕ್ಷರಾಗಿದ್ದು ಶಾಲೆಯ ಕ್ರೀಡಾ ಕಾರ್ಯಕ್ರಮವೊಂದರ ನಿಮಿತ್ತ ಓಡಾಟ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಈ ವೇಳೆ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಲ್ಲುಗುಂಡಿ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

See also  ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಸಿಂಹಪ್ರಿಯ ಭೇಟಿ,ನೆಚ್ಚಿನ ನಟ-ನಟಿಯನ್ನು ಕಂಡು ಫೋಟೋ ಕ್ಲಿಕ್ಕಿಸಿಕೊಂಡ ಜನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget