ನ್ಯೂಸ್ ನಾಟೌಟ್: ಕಲ್ಲುಗುಂಡಿಯ ದಂಡೆಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ವರದಿಯಾಗಿದೆ.
ಮೃತಪಟ್ಟವರನ್ನು ಕಲ್ಲುಗುಂಡಿ ದಂಡೆಕಜೆ ಮನೆಯ ದಿನಕರ (40ವರ್ಷ) ಎಂದು ಗುರುತಿಸಲಾಗಿದೆ. ಇವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನುವುದು ಇನ್ನೂ ತಿಳಿದು ಬಂದಿಲ್ಲ.
ವ್ಯಕ್ತಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಕೃತ್ಯ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತಪಟ್ಟು 2-3 ದಿನ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.