ಕರಾವಳಿ

ಕಲ್ಲುಗುಂಡಿ: ಅಯ್ಯಪ್ಪ ಮಾಲಾಧಾರಿ ಬಾಲಕನ ಕೈ ಹಿಡಿದು ನಡೆದ ಇಬ್ರಾಹಿಂ, ಫೋಟೋ ವೈರಲ್

ನ್ಯೂಸ್ ನಾಟೌಟ್ : ಹಿಂದೂ -ಮುಸ್ಲಿಂ ಕೋಮು ಸಂಘರ್ಷದ ಅಹಿತಕರ ಘಟನೆಗಳು ಕರಾವಳಿಯಲ್ಲಿ ಆಗಾಗ್ಗೆ ಕಂಡು ಬರುತ್ತಿದೆ. ಈ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಅಯ್ಯಪ್ಪ ಮಾಲಾಧಾರಿ ಪುಟ್ಟ ಬಾಲಕನ ಕೈ ಹಿಡಿದು ರಸ್ತೆ ದಾಟಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಎಂಬಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆಯ ಸಂದೇಶ ಸಾರಿದ ವಿಶೇಷ ಘಟನೆ ನಡೆದಿದೆ. ಇಬ್ರಾಹಿಂ ಮೈಲಿಕಲ್ಲು ಅನ್ನುವ ಹಿರಿಯ ಮುಸ್ಲಿಂ ವ್ಯಕ್ತಿಯ ಅಂಗಡಿಯಲ್ಲಿ ಮಾಲಾಧಾರಿ ಬಾಲಕನ ತಂದೆ ಕೆಲಸ ಮಾಡುತ್ತಿದ್ದು ಬಾಲಕನಿಗೆ ಹಣ್ಣು ನೀಡುವುದಕ್ಕಾಗಿ ಅಂಗಡಿಗೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿದು ಬಂದಿದೆ. ಇಬ್ರಾಹಿಂ ಅವರ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Related posts

ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಪುತ್ತೂರು ಶಾಸಕ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಆಂಬ್ಯುಲೆನ್ಸ್..! ರಸ್ತೆ ಬದಿಯಲ್ಲಿ ನಿಂತಿದ್ದ ಶಾಲಾ ಮಕ್ಕಳು ಅಪಾಯದಿಂದ ಪಾರು..!

ಮಂಗಳೂರು ಗೌಡ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಾಸುದೇವ ಗೌಡ ಪಡ್ಪು ನಿಧನ