ಕರಾವಳಿಕ್ರೈಂಸುಳ್ಯ

ಕನಕಮಜಲು ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಒಬ್ಬರಲ್ಲ ಇಬ್ಬರಿಗೆ ಗುದ್ದಿ ಕಾರು ಚಾಲಕ ಪರಾರಿ..!

1.3k

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಕನಕಮಜಲಿನಲ್ಲಿ ನಡೆದಂತಹ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಕೆಲವೇ ನಿಮಿಷಗಳಲ್ಲಿ ಇನ್ನೂ ಒಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದು‌ ಕಂಡು ಬಂದಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಾವ ರಾಮನ್ ಹಾಗೂ ಅಳಿಯ ಜನಾರ್ದನ ಅನ್ನುವವರು ಭಜನೆ ಮುಗಿಸಿ ಮನೆಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಭೀಕರವಾಗಿ ಗುದ್ದಿದೆ. ಅವಘಡದಲ್ಲಿ ರಾಮನ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಳಿಯ‌ ಜನಾರ್ದನ ಅಪಘಾತಕ್ಕೆ ಸಿಕ್ಕಿದ್ದು ಯಾರಿಗೂ ಗೊತ್ತಾಗಿರಲಿಲ್ಲ. ಮಾವನ ಆಸ್ಪತ್ರೆಗೆ ‌ದಾಖಲಿಸಿ‌ ಸುಮಾರು ಅರ್ಧ ಗಂಟೆಯ ಬಳಿಕ ಜನಾರ್ದನ ರಕ್ತದ ಮಡುವಿನಲ್ಲಿ ಬಿದ್ದದ್ದು‌ ಸ್ಥಳೀಯರ ಗಮನಕ್ಕೆ ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ‌ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

See also  ರಿಯಲ್ ಸ್ಟಾರ್ ಉಪೇಂದ್ರಗೆ  ಉಸಿರಾಟದ ಸಮಸ್ಯೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget