ಕ್ರೈಂರಾಜ್ಯ

ಕೆರೆಗೆ ಹಾರಿ ಯೋಧ ಆತ್ಮಹತ್ಯೆ..! 5 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಆತನ ಸಾವಿನ ಸುತ್ತ ಹಲವು ಅನುಮಾನ..!

234

ನ್ಯೂಸ್ ನಾಟೌಟ್: ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

ನರೇಶ್ ಯಲ್ಲಪ್ಪ ಆಗಸರ (28) ಎಂಬವರು ಶನಿವಾರ(ನ.23) ಸಂಜೆ ಪರಸನಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.

ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಬಂಗ್ಲೆಗುಡ್ಡೆ: ಪಾಳುಬಾವಿಗೆ ಬಿದ್ದ ಹಸು..! ಹಸುವಿನ ರಕ್ಷಣೆಗಾಗಿ ಕಲ್ಲುಗುಂಡಿಯತ್ತ ತೆರಳುತ್ತಿರುವ ಅಗ್ನಿಶಾಮಕ ದಳ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget