ನ್ಯೂಸ್ ನಾಟೌಟ್: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ಪೀಠ ಜಾಮೀನು ಸಂಬಂಧಿಸಿ ಎಸ್ ಐಟಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.
ದೂರುದಾರ ಮಹಿಳೆಯನ್ನು ಪ್ರತಿವಾದಿಯನ್ನಾಗಿಸಲು ಅರ್ಜಿದಾರರಿಗೆ ಸೂಚನೆ ನೀಡಿರುವ ನ್ಯಾಯಪೀಠ, ವಿಚಾರಣೆ ಏಪ್ರಿಲ್ 7 ಕ್ಕೆ ಮುಂದೂಡಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಗಳೆಲ್ಲವೂ ತಿರಸ್ಕಾರಗೊಂಡಿದ್ದವು.