ನ್ಯೂಸ್ ನಾಟೌಟ್: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ(8) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸಾನ್ವಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ. ಹೊಸದಾಗಿ ತೋಡಿದ ಬೋರ್ ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್ ವೆಲ್ ಗೆ ಜೋಡಿಸಲಾಗಿತ್ತು. ಪ್ರತ್ಯೇಕವಾಗಿ ಹೆಸ್ಕಾಂನ ವಿತರಣಾ ಮಾರ್ಗದ ಸೇವಾ ಲೈನ್ ಗೆ ಸಂಪರ್ಕ ಕಲ್ಪಿಸಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ. ಮಕ್ಕಳು ಬಳಸುತ್ತಿದ್ದ ಶೌಚಾಲಯದೊಳಗೆ ತಂತಿ ತುಂಡಾಗಿ ಬಿದ್ದಿತ್ತು. ‘ಶೌಚಾಲಯಕ್ಕೆ ಬಂದಿದ್ದ ಸಾನ್ವಿ ವಿದ್ಯುತ್ ತಂತಿ ಸ್ಪರ್ಶಿಸಿ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾಳೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಹಳಿಯಾಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಶವವನ್ನು ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Click