ರಾಜಕೀಯವೈರಲ್ ನ್ಯೂಸ್

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಸ್ ಕಳುಹಿಸಿದ್ದೇಕೆ ರಾಜ್ಯಪಾಲರು..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thaawarchand Gehlot) ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಂಬಂಧಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದು, ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ.

ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು ಎನ್ನಲಾಗಿದೆ.

ಅಧಿವೇಶನ ನಡೆಯದ ಕಾರಣ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮಾರ್ಗ ಹಿಡಿದಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ ಸರ್ಕಾರವು ಕನ್ನಡ ಪರ ಕಾರ್ಯಕರ್ತರ ಒತ್ತಡಕ್ಕೆ ಒಳಗಾಗಿದೆ. ಈ ಪ್ರಕರಣದಲ್ಲಿ ಹಲವು ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
ಫೆಬ್ರವರಿ 12 ರಂದು ಜಂಟಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿರುವ ಕಾರಣ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಿರಬಹುದು ಎಂದು ಅಂದಾಜಿಸಲಾಗಿದೆ.

Related posts

ನ್ಯಾಯಾಧೀಶರ ಮನೆಯಲ್ಲಿದ್ದ ನಾಯಿಯೇ ಕಳವು..! 12 ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲು..!

ಇಸ್ರೇಲ್ ವಿರೋಧಿ ಪ್ರತಿಭಟನೆ ವೇಳೆ ಕೈಗೆ ಬೆಂಕಿ ಹಚ್ಚಿಕೊಂಡ ಪತ್ರಕರ್ತ..! ಇಲ್ಲಿದೆ ವಿಡಿಯೋ

ಸಿಲಿಂಡರ್ ಸ್ಫೋಟದಲ್ಲಿ ಪವಾಡ ಸದೃಶವಾಗಿ ಬದುಕುಳಿದ 12 ವರ್ಷದ ಅಯ್ಯಪ್ಪ ಮಾಲಾಧಾರಿ..! ಬಾಲಕನ ತಂದೆ ಸಾವು..!