ಕರಾವಳಿಸುಳ್ಯ

ಸುಳ್ಯದ ಸಂತ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ಡಿಂಡಿಮ..! ಗಮನ ಸೆಳೆದ ವಿದ್ಯಾರ್ಥಿಗಳೇ ರಚಿಸಿದ ಕರ್ನಾಟಕದ ನಕ್ಷೆ ಇಲ್ಲಿದೆ ನೋಡಿ..

107

ನ್ಯೂಸ್‌ ನಾಟೌಟ್: ಸುಳ್ಯದ ಸಂತ ಜೋಸೆಫ್ ವಿದ್ಯಾಸಂಸ್ಥೆ ಯಲ್ಲಿ ನವೆಂಬರ್ 1 ಬುಧವಾರದಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂತ ಜೋಸೆಫ್ ಶಾಲಾ ಸಂಚಾಲಕ ರೆ. ಫಾ. ವಿಕ್ಟರ್ ಡಿ’ಸೋಜಾ ಧ್ವಜಾರೋಹಣ ನೆರವೇರಿಸಿ 68ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಶೀಲಾವತಿ ಕೊಳಂಬೆ, ಕನ್ನಡ, ನಾಡು, ನುಡಿ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದರು.

ಬಳಿಕ ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿಯ ಬಗ್ಗೆ ಭಾಷಣ, ನೃತ್ಯ ಹಾಡು ಹೇಳುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂತ ಜೋಸೆಫ್ ಶಾಲಾ ಮಕ್ಕಳು ಹಳದಿ ಮತ್ತು ಕೆಂಪು ಬಣ್ಣದ ವಸ್ತ್ರ ಧರಿಸಿ ಕರ್ನಾಟಕ ನಕ್ಷೆ ಬಿಡಿಸುವ ಮೂಲಕ ಕನ್ನಡ ನಾಡು ನುಡಿಗೆ ಗೌರವ ಸಲ್ಲಿಸಿದರು.

ಸಂತ ಜೋಸೆಫ್ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ, ಪೋಷಕರ ಸಂಘದ ಅಧ್ಯಕ್ಷ ಜೆ.ಕೆ. ರೈ, ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಹಾಗೂ ಶಾಲಾ ಶಿಕ್ಷಕರು ಶಾಲಾ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

See also  ಸುಬ್ರಹ್ಮಣ್ಯಕ್ಕೆ ಬಂದ ಮಹಿಳೆಗೆ ಹಠಾತ್ ಕಾಣಿಸಿಕೊಂಡಿತು ಎದೆನೋವು, ಆಸ್ಪತ್ರೆಗೆ ದಾಖಲಿಸಿದರೂ ಉಳಿಯಲಿಲ್ಲ ಜೀವ
  Ad Widget   Ad Widget   Ad Widget   Ad Widget   Ad Widget   Ad Widget