ಕ್ರೈಂಬೆಂಗಳೂರುವೈರಲ್ ನ್ಯೂಸ್

ಕನ್ನಡ ನಾಮಫಲಕ ಅಳವಡಿಸುವಂತೆ ಬೃಹತ್​ ಪ್ರತಿಭಟನೆ..! ಲೈಟಿಂಗ್ ಬೋರ್ಡ್ ಗಳನ್ನು ದ್ವಂಸಗೊಳಿಸಿದ್ಯಾರು? 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದೇಕೆ?

246

ನ್ಯೂಸ್ ನಾಟೌಟ್ : ರಾಜ್ಯದಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ವತಿಯಿಂದ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದ್ದು, ಕಾರ್ಯಕರ್ತರು ಇಂಗ್ಲಿಷ್​ ಭಾಷೆಯಲ್ಲಿದ್ದ ಜಾಹೀರಾತುಗಳನ್ನು ಹರಿದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು(ಡಿ.27) ನಡೆಯಿತು.

ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ನಡೆಸಲಾಗುತ್ತಿದೆ. ಈಗಾಗಲೇ ಪ್ರತಿಭಟನಾ ರ‍್ಯಾಲಿ ಆರಂಭವಾಗಿದ್ದು, ಸಾದಹಳ್ಳಿ ಟೋಲ್ ಸಮೀಪ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಇದೇ ವೇಳೆ, ಕೆಲ ಕಾರ್ಯಕರ್ತರು ಏರ್ಪೋಟ್ ಟೋಲ್ ಬಳಿ ಇಂಗ್ಲೀಷ್ ಭಾಷೆಗಳಲ್ಲಿದ್ದ ನಾಮಫಲಕ, ಜಾಹೀರಾತುಗಳನ್ನು ಹರಿದು ಹಾಕಿದ್ದಾರೆ. ಸಾದಹಳ್ಳಿಯ ಬ್ಲೂಮ್ ಹೋಟೆಲ್ ಬಳಿ ‌ಲೈಟಿಂಗ್ ಬೋರ್ಡ್ ಒಡೆದು ದ್ವಂಸ ಮಾಡಿದ್ದಾರೆ ಎನ್ನಲಾಗಿದೆ.

ಡಿಸಿಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಒಬ್ಬರು ಎಸಿಪಿ, 6 ಮಂದಿ ಇನ್ಸ್​ಪೆಕ್ಟರ್, 12 ಸಬ್ ಇನ್ಸ್​ಪೆಕ್ಟರ ಸೇರಿದಂತೆ 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟೋಲ್ ಗೇಟ್ ಸಮೀಪ ಅಡಿಷನಲ್ ಕಮಿಷನರ್ ರಮಣ್ ಗುಪ್ತಾ ಅವರು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕನ್ನಡ ನಾಮಫಲಕ ಹಾಕದವರ ವಿರುದ್ಧ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕರವೇ ಪ್ರತಿಭಟನಾ ರ‍್ಯಾಲಿ ತಡೆಯಲು ಪೊಲೀಸ್ ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಈಗಾಗಲೇ ಬೆಂಗಳೂರು ಏರ್​ಪೋರ್ಟ್ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ, ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ನಾಲ್ಕು ಬಸ್​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

See also  ದರ್ಶನ್ ಪ್ರಕರಣ: ತಡರಾತ್ರಿ ಪವಿತ್ರಾ ಗೌಡ ಮ್ಯಾನೇಜರ್ ನನ್ನು ವಶಕ್ಕೆ ಪಡೆದ ಪೊಲೀಸ್..! ಇಂದು(ಜೂ.16) ಪವಿತ್ರಾ ಗೌಡ ಮನೆಯಲ್ಲಿ ಸ್ಥಳ ಮಹಜರು..! 10 ಮೊಬೈಲ್ ಗಳು ಜಪ್ತಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget