ಬೆಂಗಳೂರುರಾಜಕೀಯ

Shakthi Yojane: ‘ಶಕ್ತಿ ಯೋಜನೆ ಶೀಘ್ರದಲ್ಲೇ ಸ್ಥಗಿತ’ ನಿಜವೇ ?ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಹೇಳಿದ್ದೇನು?

184

ನ್ಯೂಸ್ ನಾಟೌಟ್ : ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಶೀಘ್ರದಲ್ಲೇ ಸ್ಥಗಿತಗೊಳ್ಳುತ್ತೆ ಅನ್ನುವ ಊಹಾಪೂಹಾ ಸುದ್ದಿಗಳು ಹರಿದಾಡುತ್ತಿದ್ದವು.ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿ ಭಾರಿ ವೈರಲ್ ಆಗಿತ್ತು.ಇದೀಗ ಈ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.

ಈ ಕುರಿತಾಗಿ ಪ್ರಕಟಣೆ ನೀಡಿರುವ ಕೆಎಸ್‌ಆರ್‌ಟಿಸಿ “ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಹೇಳಿದೆ.

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಸದ್ಯ ಇದರಿಂದಾಗಿ ಮಹಿಳೆಯರು ಕೊಂಚ ನಿರಾಳರಾಗಿದ್ದಾರೆ. ಶಕ್ತಿ ಯೋಜನೆ ಬಂದಾಗಿನಿಂದ ಸಂಭ್ರಮದಲ್ಲಿ ತೇಲಾಡಿದ್ದ ಮಹಿಳೆಯರಿಗೆ ಶಕ್ತಿ ಯೋಜನೆ ಕೊನೆಗೊಳ್ಳುತ್ತೆ ಎನ್ನುವ ವದಂತಿ ಹರಿದಾಡುತ್ತಿರುವುದನ್ನು ನೋಡಿ ಭಾರಿ ಆಘಾತಕ್ಕೊಳಗಾಗಿದ್ದರು.ಶಾಲಾ ವಿದ್ಯಾರ್ಥಿನಿಯರು,ದಿನನಿತ್ಯ ಕೆಲಸಕ್ಕೆ ಹೋಗುವ ಮಹಿಳೆಯರು ಇದರ ಪ್ರಯೋಜನವನ್ನು ಹೆಚ್ಚಾಗಿ ಪಡೆಯುತ್ತಿದ್ದಾರೆ.

See also  ನಾಳೆ(ಎಪ್ರಿಲ್ 24) ಸಂಜೆ 6 ಗಂಟೆಯಿಂದ 26ರವರೆಗೆ ನಿಷೇದಾಜ್ಞೆ ಜಾರಿ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget