ಕ್ರೈಂರಾಜ್ಯಸಿನಿಮಾ

ನಟ ದರ್ಶನ್‌ ಗೆ ಆಪರೇಷನ್‌ ಮಾಡಬೇಕಿದೆ, ಜಾಮೀನು ನೀಡಿ ಎಂದು ಮನವಿ ಸಲ್ಲಿಸಿದ ವಕೀಲರು..! ಹೈಕೋರ್ಟ್‌ ಈ ಬಗ್ಗೆ ಹೇಳಿದ್ದೇನು..?

218

ನ್ಯೂಸ್ ನಾಟೌಟ್: ನಟ ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅ.28ಕ್ಕೆ ಮುಂದೂಡಿದೆ.
ಇಂದು(ಅ.22) ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್‌, ತೀವ್ರವಾದ ಬೆನ್ನು ನೋಬಿನಿಂದ ಬಳಲುತ್ತಿರುವ ದರ್ಶನ್‌ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ದರ್ಶನ್‌ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ (Surgical Operation) ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡರು.

ಈ ವೇಳೆ ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

Click

https://newsnotout.com/2024/10/cab-driver-kannada-news-viral-news-romance-viral-notice/
See also  ನಟ ಕಮಲ್ ಹಾಸನ್‌ ಗೆ ಕನ್ನಡ ಪುಸ್ತಕ ಉಡುಗೊರೆ ನೀಡಿದ `ಕನ್ನಡತಿ’ ಧಾರವಾಹಿ ಖ್ಯಾತಿಯ ನಟಿ ರಂಜನಿ..! ಇಲ್ಲಿದೆ ವೈರಲ್ ಪೋಸ್ಟ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget