ಕರಾವಳಿಕ್ರೈಂರಾಜ್ಯ

ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ದಾಳಿ..! ಖಾಸಗಿ ಸಂಸ್ಥೆಯಲ್ಲಿ ಒಟ್ಟಿಗೆ ದುಡಿಯುತ್ತಿದ್ದ ಇಬ್ಬರು

252

ನ್ಯೂಸ್ ನಾಟೌಟ್: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ ಎಂದು ವರದಿ ತಿಳಿಸಿದೆ.

ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದನ್ ಹಲ್ಲೆಗೊಳಗಾದ ಯುವಕ ಎಂದು ವರದಿ ತಿಳಿಸಿದೆ. ನಂದನ್ ಹಾಗೂ ಅನ್ಯಕೋಮಿನ ಯುವತಿ ಒಂದೇ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ನಂದನ್ ಹಾಗೂ ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಬೈಕ್‌ನಲ್ಲಿ ಹೋಗುವುದನ್ನು ಗಮನಿಸಿದ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿದ್ದಾರೆ.

ಬಳಿಕ ನಂದನ್ ಅನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡು ಯುವಕ ಓಡಿ ಬಂದಿದ್ದಾನೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಚನ್ನಬಸಪ್ಪ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Click 👇

https://newsnotout.com/2024/06/election-result-and-toll-gate-charge
See also  ತೀರ್ಥಹಳ್ಳಿಯಲ್ಲಿ ಕಾರು-ಬಸ್‌ ನಡುವೆ ಅಪಘಾತ: ಮಂಗಳೂರು ಕುಪ್ಪೆಪದವಿನ ಯುವಕ ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget