Latestಕ್ರೈಂವೈರಲ್ ನ್ಯೂಸ್

ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ..! ಚಾಲಕ ಆಸ್ಪತ್ರೆಗೆ ದಾಖಲು..!

265

ನ್ಯೂಸ್ ನಾಟೌಟ್: ಚಲಿಸುತ್ತಿದ್ದ ಬೈಕ್‌ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.

ಮತ್ತಿಕಟ್ಟೆ ನಿವಾಸಿ ಕುಮಾರ್ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಬುಧವಾರ ಸಾಯಂಕಾಲ 7 ಗಂಟೆಯ ಹೊತ್ತಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣ ದಾಳಿ ನಡೆಸಿದ್ದು, ಗಾಯಗೊಂಡ ಕುಮಾರ್ ಬಣಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ. ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನ ಜನರು ಇದೀಗ ಕಾಡು ಕೋಣ ದಾಳಿಗೂ ಭಯಪಡುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಇಸ್ರೇಲ್‌ ನ ಅತಿ ದೊಡ್ಡ ಆಸ್ಪತ್ರೆ ಮೇಲೆ ಇರಾನ್ ಕ್ಷಿಪಣಿ ದಾಳಿ..! ವಿಡಿಯೋ ವೈರಲ್

See also  ಸುಳ್ಯ: ಮಲಗಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಹತ್ತಿದ ವಾಹನ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget