ಕರಾವಳಿಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಬಿರುಗಾಳಿಗೆ ಮಗುಚಿದ ದೋಣಿ..! ಪುಟ್ಟ ಮಕ್ಕಳು ಸೇರಿ 6 ಮಂದಿ ಜಲಸಮಾಧಿ..! ಇಲ್ಲಿದೆ ವಿಡಿಯೋ

267

ನ್ಯೂಸ್ ನಾಟೌಟ್: ಭೀಕರ ಗಾಳಿಗೆ ದೋಣಿಯಿಂದು ಮಗುಚಿ ಬಿದ್ದು, ದೋಣಿಯಲ್ಲಿದ್ದ 6 ಜನ ನೀರುಪಾಲಾಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆ ಆಗಿದ್ದಾರೆ. ನೀರು ಪಾಲಾಗಿರುವ ಆರು ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು.

ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದಾರೆ. ಇನ್ನೂ ಅದೇ ದೋಣಿಯಲ್ಲಿ ಮತ್ತಿಬ್ಬರು ವಿಹಾರಿಗಳು ಸಹ ಪಯಣಿಸುತ್ತಿದ್ದು, ಅವರೂ ನೀರು ಪಾಲಾಗಿದ್ದಾರೆ ಎನ್ನಲಾಗಿದೆ.

ಆ ಇಬ್ಬರು ದುರ್ದೈವಿಗಳನ್ನು ಕುಗ್ಗಾಂವ್ ಗ್ರಾಮದ ಅನುರಾಗ್ ಅವಘಡೆ, ಗೌರವ್ ಡೋಂಗರೆ ಎಂದು ಗುರುತಿಸಲಾಗಿದೆ. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ.

Click 👇

https://newsnotout.com/2024/05/dysp-cyber-case-madikeri-bank-account
https://newsnotout.com/2024/05/bengaluru-13-year-old-sister-pregnent-by-brother
https://newsnotout.com/2024/05/lipslick-ban-in-nk-and-rules
See also  ಸುಳ್ಯ: ಒಂದು ಕಡೆ ಮಳೆ, ಮತ್ತೊಂದು ಕಡೆ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget