ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಕಾರು..! ಇಲ್ಲಿದೆ ಸಿಸಿಟಿವಿ ದೃಶ್ಯ..!

115

ನ್ಯೂಸ್ ನಾಟೌಟ್: ಪಟಾಕಿ ಸಿಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುಣೆಯ ಪಿಂಪ್ರಿ ಚಿಂಚ್‌ ವಾಡ್ ಎಂಬ ಪ್ರದೇಶದಲ್ಲಿ ನಡೆದಿದೆ.

ನವೆಂಬರ್ 1 ರಂದು ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.

ದೀಪಾವಳಿ ಹಿನ್ನೆಲೆಯಲ್ಲಿ ಸೋಹಂ ಪಟೇಲ್ ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ವೇಗವಾಗಿ ಬಂದ ಕಾರು ಆತನ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಕಲ್ಲುಗುಂಡಿ: ಸೇತುವೆ ಅಡಿಯಲ್ಲಿ ಅಕ್ರಮ ಮರಳುಗಾರಿಕೆ, ಸಾರ್ವಜನಿಕರಿಂದ ದೂರು, ಬೆಂಡೆತ್ತಿ ಬ್ರೇಕ್ ಹಾಕಿದ ಅರಣ್ಯ ಇಲಾಖೆ
  Ad Widget   Ad Widget   Ad Widget   Ad Widget   Ad Widget   Ad Widget