ಕ್ರೈಂವೈರಲ್ ನ್ಯೂಸ್ಸಿನಿಮಾ

ಶೌಚಕ್ಕೆ ಕೆಳಗೆ ಕೂರಲು ಆಗಲ್ಲ, ಸರ್ಜಿಕಲ್‌ ಚೇರ್‌ ಬೇಕು ಎಂದು ಕೇಳಿದ ದರ್ಶನ್‌..! ಬೆಂಗಳೂರಿನಿಂದ ನಟನ ಆರೋಗ್ಯ ವರದಿ ತರಿಸಿಕೊಂಡ ಅಧಿಕಾರಿಗಳು..!

243

ನ್ಯೂಸ್‌ ನಾಟೌಟ್‌: ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಸೇರಿ 4 ದಿನಗಳು ಕಳೆದಿದ್ದು, ನಟನ ಬೇಡಿಕೆಯಂತೆ ಶೌಚಾಲಯಕ್ಕೆ ಸರ್ಜಿಕಲ್ ಚೇರ್ ನೀಡುವ ಕುರಿತು ಜೈಲಿನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬೆನ್ನು ಮೂಳೆ ಸಮಸ್ಯೆ, ಮಲಬದ್ಧತೆ ಸಮಸ್ಯೆಯಿದೆ. ಕೆಳಗೆ ಕೂರಲು ಆಗುವುದಿಲ್ಲ. ಶೌಚಾಲಯಕ್ಕೆ ಸರ್ಜಿಕಲ್ ಚೇರ್ ನೀಡುವಂತೆ ಡಿಐಜಿ ಮುಂದೆ ನಟ ದರ್ಶನ್ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ಬೆಂಗಳೂರಿನಿಂದ ನಟನ ಆರೋಗ್ಯ ವರದಿ ಬಂದಿದ್ದು, ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಭಾನುವಾರವೂ(ಆ.03) ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇಂದು ನಟನಿಗೆ ಸರ್ಜಿಕಲ್ ಚೇರ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ನಟ ದರ್ಶನ್ ಜೈಲಿನ ಊಟಕ್ಕೆ ಒಗ್ಗಿಕೊಂಡಿದ್ದಾರೆ. ಭಾನುವಾರ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಮಾಡಿದ್ದಾರೆ. ಶನಿವಾರ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಜೈಲಿಗೆ ಭೇಟಿ ಕೊಟ್ಟಾಗ ನೀಡಿದ್ದ ಬೇಕರಿ ತಿಂಡಿಗಳನ್ನು ದರ್ಶನ್ ಸೇವಿಸಿದ್ದಾರೆ. ಜೈಲಿನ ಬ್ಯಾರಕ್‌ ಆವರಣದಲ್ಲಿಯೇ ವಾಕಿಂಗ್ ಮಾಡುತ್ತಿದ್ದಾರೆ. ಇನ್ನು ಬೆಂಗಳೂರಿನಿಂದ ಬಂದ ದರ್ಶನ್ ಮೆಡಿಕಲ್ ರಿಪೋರ್ಟ್ ಮುಂದಿಟ್ಟುಕೊಂಡು ಆರೋಗ್ಯ ತಪಾಸಣೆ ನಡೆಯಲಿದೆ.

See also  ಕುಂಭಮೇಳದ ಗಂಗಾ ನದಿ ತೀರದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ..! ಯುಪಿ ಸರ್ಕಾರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget