ಕ್ರೈಂಬೆಂಗಳೂರು

1 ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್‌ ಗಳಿಗೆ ನೋಟಿಸ್..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ:ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಎಲ್ಲೆಡೆ ತಪಾಸಣೆ ಹೆಚ್ಚಿಸಿದ್ದಾರೆ. ಈ ಮಧ್ಯೆ ಬೆಂಗಳೂರು ಚುನಾವಣಾಧಿಕಾರಿಗಳು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟೀಸ್ ನೀಡಿ ಬಿಸಿ ಮುಟ್ಟಿಸಿದ್ದಾರೆ. ಅವಧಿ ಮೀರಿ ಬಾರ್ ಓಪನ್ ಮಾಡಿರುವ ಒಂದು ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಿದ್ದಾರೆ.

ದಾಖಲೆ ಇಲ್ಲದೇ ಮದ್ಯ ಮಾರಾಟ ಮಾಡ್ತಾ ಇದ್ದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಚುನಾವಣಾ ಹಿನ್ನೆಲೆ ಬಾರ್ & ರೆಸ್ಟೋರೆಂಟ್‌ಗಳಿಗೆ ಚುನಾವಣಾ ಆಯೋಗ ಕೆಲವೊಂದು ನಿಯಮ ಪಾಲನೆಗೆ ಸೂಚಿಸಿದೆ. ಅದನ್ನ ಜಿಲ್ಲಾ ಚುನಾವಣಾಧಿಕಾರಿಗಳು ಗಮನಿಸುತ್ತದ್ದಾರೆ ಎನ್ನಲಾಗಿದೆ. ಅದೇ ರೀತಿಯಲ್ಲಿ ಬೆಂಗಳೂರು ನಗರದಲ್ಲಿ ಬಾರ್ & ರೆಸ್ಟೋರೆಂಟ್‌ಗಳು, ಎಂಆರ್‌ಪಿಗಳು ನಿಯಮ ಉಲ್ಲಂಘನೆ ಮಾಡುತ್ತಿವೆ. ಸಮಯ ಮುಗಿದಿದ್ದರೂ ಬಾರ್ ಓಪನ್ ಮಾಡಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ.

ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು ಒಂದು ಸಾವಿರಕ್ಕೆ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಲಾಗಿದೆಯಂತೆ. ಎಂಆರ್‌ಪಿ ಶಾಪ್‌ಗಳು ಕೂಡ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅಕ್ರಮವಾಗಿ ಮದ್ಯ ಸಾಗಾಟ ಮಾಡುವುದು ಕಂಡು ಬಂದಿದ್ದು, ಮದ್ಯ ಜಪ್ತಿ ಮಾಡಿದ್ದಾರೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿ ಕೆಲವೊಂದು ಬಾರ್‌ಗಳನ್ನ ಮುಚ್ಚಿಸುವಂತಹ ಕೆಲಸಕ್ಕೆ ಮುಂದಾಗಲಿದ್ದಾರೆ ಎನ್ನಲಾಗಿದೆ.

Related posts

ʻಇವಿಎಂ ಹ್ಯಾಕ್‌ ಮಾಡಬಹುದುʼ ಎಂದು ವಿಡಿಯೋ ಹರಿಬಿಟ್ಟವನ ವಿರುದ್ಧ ಎಫ್‌.ಐ.ಆರ್..! ಎಚ್ಚರಿಕೆ ನೀಡಿದ ಚುನಾವಣಾ ಆಯೋಗ

ಮಂಗಳೂರು: ಬೆಂಕಿ ಕೊಟ್ಟು ಕಾರ್ಮಿಕನನ್ನು ಸುಟ್ಟು ಕೊಂದ ತೌಸಿಫ್..! ವಿದ್ಯುತ್ ಶಾಕ್ ಕಥೆಯ ಹಿಂದಿತ್ತು ನಿಗೂಢ ಕೊಲೆಯ ಕಹಾನಿ!

ಮಂಗಳೂರು: ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ..! ಓರ್ವ ಅರೆಸ್ಟ್..!