ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಬಾಲ್ಯ ಸ್ನೇಹಿತೆಯನ್ನೇ ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಂದ 20ರ ಯುವಕ..! ವಿವಾಹವಾಗುವಂತೆ ಒತ್ತಾಯಿಸುತ್ತಿದ್ದ ಆಕೆ..!

218

ನ್ಯೂಸ್ ನಾಟೌಟ್: ಹದಿನಾರು ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಬೆಂಕಿ ಹಚ್ಚಿ ಕೊಂದ ಪೈಶಾಚಿಕ ಕೃತ್ಯ ಆಂದ್ರ ತಿರುಪತಿಯ ಕಡಪಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ತೀವ್ರ ಸುಟ್ಟ ಗಾಯಗಳಿಂದ ಶನಿವಾರ(ಅ.19) ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಭಾನುವಾರ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಕೊನೆಯುಸಿರೆಳೆದಿದ್ದಾಳೆ.

ಆರೋಪಿ ಜಕ್ಕಲ ವಿಘ್ನೇಶ್ (20) ಎಂಬಾತನನ್ನು ಬಂಧಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿಘ್ನೇಶ್ ಹಾಗೂ ಸಂತ್ರಸ್ತ ಯುವತಿ ಬಾಲ್ಯದಿಂದಲೇ ಸ್ನೇಹಿತರಾಗಿದ್ದರು. ಆದರೆ ಆರೋಪಿ ಈಕೆಯನ್ನು ಬಿಟ್ಟು ಬೇರೊಬ್ಬಳ ಜತೆ ವಿವಾಹವಾಗಿದ್ದ. ಆಕೆ ಇದೀಗ ಗರ್ಭಿಣಿ ಎಂದು ಎಸ್ಪಿ ಹರ್ಷವರ್ಧನ ರಾಜು ಹೇಳಿದ್ದಾರೆ. ಬಾಲ್ಯ ಸ್ನೇಹಿತೆಯಾಗಿದ್ದ ಯುವತಿ ತನ್ನನ್ನು ವಿವಾಹವಾಗುವಂತೆ ಆಕೆ ಆತನನ್ನು ಪದೇ ಪದೇ ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಮುಗಿಸುವ ಸಂಚು ರೂಪಿಸಿ ಈ ಕೃತ್ಯಕ್ಕೆ ಮುಂದಾಗಿದ್ದ ಎನ್ನಲಾಗಿದೆ.

ಈ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ವಿಶೇಷ ನ್ಯಾಯಾಲಯದಲ್ಲಿ ಪೂರ್ಣಗೊಳಿಸಿ ಆರೋಪಿಗೆ ಮರಣ ದಂಡನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಪೊಲೀಸರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Click

https://newsnotout.com/2024/10/couple-mother-poisoned-child-kananda-news-s/
https://newsnotout.com/2024/10/govt-bus-collision-to-pedestrain-kannada-news-h/
See also  ಗೂಗಲ್‌ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಹುಡುಕಲ್ಪಟ್ಟ ಕ್ರಿಕೆಟಿಗ ಯಾರು..? ಗೂಗಲ್ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget