ಕ್ರೈಂಬೆಂಗಳೂರು

ಸರ್ಕಾರಿ ಶಾಲೆಯ ಸಮೀಪ ಕಟ್ಟಿಹಾಕಿದ್ದ3 ಹಸುಗಳು ನಾಪತ್ತೆ..! ಹೆಲ್ಮೆಟ್‌ ಧರಿಸಿ ಹಸುಗಳನ್ನು ಕದ್ದಿದ್ದವನ ಬಂಧನ..!

243

ನ್ಯೂಸ್ ನಾಟೌಟ್: ಇತ್ತೀಚೆಗಷ್ಟೇ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣ ನಡೆದಿತ್ತು. ಈ ಬೆನ್ನಲ್ಲೇ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಸುಗಳು ಕಳ್ಳತನವಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಲ್ಮೆಟ್‌ ಧರಸಿ ಬಂದ ವ್ಯಕ್ತಿಯೊಬ್ಬ ಸುಮಾರು 2 ಲಕ್ಷ ರೂ. ಮೌಲ್ಯದ ಮೂರು ಹಸುಗಳನ್ನು ಕಳ್ಳತನ ಮಾಡಿದ್ದಾನೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜಕ್ಕೂರಿನ ಸರ್ಕಾರಿ ಶಾಲೆಯ ಸಮೀಪ ಖಾಲಿ ಜಾಗದಲ್ಲಿ ಹಸುಗಳನ್ನು ಕಟ್ಟಿಹಾಕಲಾಗಿತ್ತು. ಆದರೆ, ಜ.15ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಾಣೆಯಾಗಿವೆ. ಮೂರು ದಿನಗಳು ಹುಡುಕಾಟ ನಡೆಸಿದ ಮಾಲೀಕರು ಬಳಿಕ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಜ.19ರಂದು ಎಫ್‌ಐಆರ್‌ ದಾಖಲಾಗಿದೆ.
ದೂರು ದಾಖಲಾಗ್ತಿದ್ದಂತೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಓರ್ವ ಆರೋಪಿಯನ್ನ ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಉದ್ದೇಶದಿಂದ ಕಳ್ಳತನ ಮಾಡಿದ್ದ ಅನ್ನೋದರ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನೂ ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿ ಮೇರೆಗೆ ಒಂದು ಹಸುವನ್ನು ಪೊಲೀಸರು ಪತ್ತೆ ಮಾಡಿದ್ದು, ಠಾಣೆಗೆ ತಂದು ಕಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎನ್ನಲಾಗಿದೆ.

Click

https://newsnotout.com/2025/01/praveen-nettasru-cadr-21-man-arrested-by-helping-accused/
https://newsnotout.com/2025/01/10-year-old-boy-kannada-news-154-kg-mother-k-news-d/
See also  ಪ್ರವಾಸಕ್ಕೆ ಕರೆದೊಯ್ದು 11 ವರ್ಷದ ಮಗನ ಕತ್ತು ಸೀಳಿದ ತಾಯಿ..! ಮಗನನ್ನು ಕೊಂದ ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿದ ಮಹಿಳೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget