ರಾಜ್ಯವೈರಲ್ ನ್ಯೂಸ್ಶಿಕ್ಷಣ

ಪ್ರೌಢಶಾಲಾ ಸಹ ಶಿಕ್ಷಕರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಬಡ್ತಿ ನೀಡುತ್ತೇವೆ ಎಂದ ಶಿಕ್ಷಣ ಸಚಿವ, ಇಲ್ಲಿದೆ ಸಂಪೂರ್ಣ ಮಾಹಿತಿ

157

ನ್ಯೂಸ್ ನಾಟೌಟ್: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಎಸ್.ಮಧು ಬಂಗಾರಪ್ಪ ಉತ್ತರಿಸಿದರು.

ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಸಂಬಂಧಿಸಿದ ಇಲಾಖೆಯು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 16ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ ನಿಯಮಗಳು 1957ರ ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್‌ನಲ್ಲಿ ಪತ್ರ ಬರೆಯಲಾಗಿದೆ. ಪತ್ರದಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಧಾರವಾಡ ಮತ್ತು ಕಲಬುರಗಿಯ ಅಪರ ಆಯುಕ್ತರಿಗೆ ಹಾಗೂ ಪದವಿ ಪೂರ್ವ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

Click

https://newsnotout.com/2024/12/uppinangady-nekkilady-kannada-news-ambulance-hits-home-ground/
https://newsnotout.com/2024/12/toilet-issue-kannada-news-rented-people-9-dna-test-viral-news/
https://newsnotout.com/2024/12/kananda-news-bomb-viral-news-viral-news-police/
https://newsnotout.com/2024/12/kannada-news-bus-viral-news-belagavi-viral-news-s/
See also  ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ ಶಿಕ್ಷಕಿ..! ವಿಡಿಯೋ ವೈರಲ್ ಆದ ಬಳಿಕ ಶಿಕ್ಷಕಿ ಅಮಾನತ್ತು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget