ನ್ಯೂಸ್ ನಾಟೌಟ್: ಹಿಮಾಚಲ ಪ್ರದೇಶದಲ್ಲಿ ಇಂದು(ಅ.15) ಲಘು ಭೂಕಂಪನ ನಡೆದಿದೆ. ಮಂಡಿ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಭೂಮಿ ಕಂಪಿಸಿದೆ. ಈ ಕುರಿತು ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಬಹಿರಂಗಪಡಿಸಿದೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.3ರಷ್ಟಿತ್ತು. ಕುಲು ಮತ್ತು ಮಂಡಿ ನಡುವಿನ ಗುಡ್ಡಗಾಡು ಪ್ರದೇಶದಲ್ಲಿ 5 ಕಿಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಆದರೆ, ಭೂಕಂಪನದ ಪ್ರಮಾಣ ಕಡಿಮೆಯಾಗಿದ್ದರಿಂದ ಯಾವುದೇ ಪ್ರಾಣ ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎಂದು ವರದಿ ತಿಳಿಸಿದೆ.
Click