ನ್ಯೂಸ್ ನಾಟೌಟ್ : ಖಾಸಗಿ ಬಸ್ ಗೆ ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಆಂಧ್ರ ಮೂಲದ ಧನಂಜಯ ರೆಡ್ಡಿ(31), ಕಲಾವತಿ(35) ಮೃತರು ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ತ್ರಿಬಲ್ ರೈಡಿಂಗ್ ವೇಳೆಯೇ ಯುವಕ-ಯುವತಿ ಕಿಸ್ಸಿಂಗ್..! ಪ್ರಶ್ನಿಸಿದ ಸವಾರನಿಗೆ ಯುವಕರಿಂದ ಧಮ್ಕಿ..!
ಭೀಕರ ಅಪಘಾತದಲ್ಲಿ ಕಾರು ಬೆಂಕಿಯಿಂದ ಹೊತ್ತಿ ಉರಿದಿದ್ದರೆ, ಬಸ್ ಪಲ್ಟಿಯಾಗಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮದನಪಲ್ಲಿ ನಿವಾಸಿಗಳಾದ ಇಬ್ಬರು ಸುಟ್ಟು ಕರಕಲಾಗಿದ್ದರೆ, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದವರು ಕೂಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.