ಕ್ರೈಂರಾಜ್ಯವೈರಲ್ ನ್ಯೂಸ್

ಕಾರವಾರ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ..! 18 ಕಾರ್ಮಿಕರು ಅಸ್ವಸ್ಥ

ನ್ಯೂಸ್ ನಾಟೌಟ್: ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್ ​ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್ ಯಲ್ಲಿ ನಡೆದಿದೆ. ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, ಉತ್ತರಪ್ರದೇಶ ಮತ್ತು ಬಿಹಾರ ಮೂಲದ 18 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ.

ಸದ್ಯ ಸ್ಥಳಕ್ಕೆ ಡಿವೈಎಸ್​​ಪಿ ಗಿರೀಶ್ ಹಾಗೂ ಪೊಲೀಸರ ತಂಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕೆಲ‌ ದಿನದ‌ ಹಿಂದೆ ಕ್ಲೋರಿನ್ ಸೋರಿಕೆಯಿಂದ ಬಿಣಗಾ ಗ್ರಾಮದ ನಿವಾಸಿ ನಾಗರಾಜ್ ಎಂಬುವವರು ಮೃತಪಟ್ಟಿದ್ದರು.
ಅನಾಹುತ ಸಂಭವಿಸಿದರೂ ಕಂಪನಿ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿಲ್ಲ. 2 ಗಂಟೆಗಳಿಂದ ಯಥಾವತ್ತಾಗಿ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಲ್ಲರನ್ನೂ ಹೊರಕಳಿಸಿ ಕೆಲಕಾಲ ಕಂಪನಿ ಸ್ಥಗಿತಗೊಳಿಸದೆ ನಿರ್ಲಕ್ಷ್ಯವಹಿಸಿದೆ. ರಾಸಾಯನಿಕ ಒಳಗೆ ಆವರಿಸಿರುವ ಹಿನ್ನೆಲೆ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

Click

https://newsnotout.com/2025/01/man-in-rented-house-fridge-kannada-news-married/
https://newsnotout.com/2025/01/kerala-misbehaviour-kannada-news-allegation-case-registered-s/
https://newsnotout.com/2025/01/naxal-surrender-issue-weapon-found-kannada-news-d/
https://newsnotout.com/2025/01/udupi-bike-and-lorry-issue-kananda-news-viral-news-hospital/
https://newsnotout.com/2025/01/shrirama-sena-kannada-news-complaint-issue-hd/
https://newsnotout.com/2025/01/gajadeepa-dankar-vice-president-of-india-kannada-news-d/

Related posts

ಸ್ಕೂಲ್ ಬಸ್​ ಡ್ರೈವರ್ ಜೊತೆ 8ನೇ ತರಗತಿ ವಿದ್ಯಾರ್ಥಿನಿಯ ಲವ್.? ಹೊಸ ವರ್ಷದ ಮಧ್ಯರಾತ್ರಿಯೇ ಇಬ್ಬರ ದುರಂತ ಅಂತ್ಯ!

ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ..! ತಾನೇ ಹೋಗಿ ಪೊಲೀಸರಿಗೆ ಶರಣಾದ ಆರೋಪಿ..!

Ram Mandir: ಇನ್ನು ಮುಂದೆ ಅಯೋಧ್ಯೆಯ ರಾಮ ಮಂದಿರದ ಆವರಣದಲ್ಲಿ ಮೊಬೈಲ್​ ಬಳಕೆ ನಿಷೇಧ..! ವಿಐಪಿ ಮತ್ತು ವಿವಿಐಪಿಗಳು ಕೂಡ ಮೊಬೈಲ್ ಫೋನ್ ಕೊಂಡೊಯ್ಯುವಂತಿಲ್ಲ..!