ರಾಜಕೀಯವೈರಲ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಯ ಹಣ ಹಲವರಿಗೆ ಬಾರದೆ ಇರೋದಕ್ಕೆ ಸಚಿವೆ ಹೇಳಿದ್ದೇನು? ಹಣ ಬಿಡುಗಡೆ ತಡವಾಗುತ್ತಿರುವುದೇಕೆ?

206

ನ್ಯೂಸ್ ನಾಟೌಟ್ : ಗೃಹಲಕ್ಷ್ಮಿ ಯೋಜನೆಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು. ಬಾಕಿ ಉಳಿದ ಫಲಾನುಭವಿಗಳಿಗೆ ಶೀಘ್ರ ಹಣ ತಲುಪಿಸಬೇಕು. ಇನ್ನು ಎರಡನೇ ಕಂತಿನ ಹಣವು ಹಂತ ಹಂತವಾಗಿ ಬಿಡುಗಡೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಗುರುವಾರ ನಡೆದ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವೆ, “ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ” ಸೂಚಿಸಿದ್ದಾರೆ.

ಆಗಸ್ಟ್‌ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್‌ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್‌ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್‌ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.

See also  ನಾಳೆ(ಜು.23) ಮೋದಿ-3.0 ಸರ್ಕಾರದ ಮೊದಲ ಬಜೆಟ್..! ಯಾವ ವರ್ಗಕ್ಕೆ ಸಿಗಲಿದೆ ಹೆಚ್ಚಿನ ಕೊಡುಗೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget