Latestಕ್ರೈಂವೈರಲ್ ನ್ಯೂಸ್ಸಿನಿಮಾ

ಖ್ಯಾತ ಬಹುಭಾಷಾ ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ..! ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಪೊಲೀಸರಿಗೆ ಧಮ್ಕಿ ಹಾಕಿದ ಗಾಯಕಿ, ಪ್ರಕರಣ ದಾಖಲು..!

898

ನ್ಯೂಸ್ ನಾಟೌಟ್: ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ(ಜೂ.10) ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ.

ಹೈದರಾಬಾದ್ ​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯ ಮೇಲೆ ದಾಳಿ ನಡೆಸಿದ ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಿದ್ದು, ಮಾದಕ ವಸ್ತು ಸೇವಿಸಿರುವುದು ಖಾತ್ರಿ ಆಗಿದೆ.

ಮಂಗ್ಲಿ ಹುಟ್ಟುಹಬ್ಬದ ಪಾರ್ಟಿಯ ಮೇಲೆ ಹೈದರಾಬಾದ್ ಪೊಲೀಸರ ಮಾದಕ ವಸ್ತು ನಿಗ್ರಹ ದಳದ ಸದಸ್ಯರು ದಾಳಿ ನಡೆಸಿದ್ದು, ಈ ವೇಳೆ ಪಾರ್ಟಿಯಲ್ಲಿ ಹಾಜರಿದ್ದವರ ರಕ್ತದ ಮಾದರಿಗಳನ್ನು ತೆಗೆದುಕೊಳ್ಳಲಾಗಿತ್ತು. ಆ ಪೈಕಿ ಒಂಬತ್ತು ಮಂದಿ ಮಾದಕ ವಸ್ತು ಸೇವಿಸಿರುವುದು ಖಾತ್ರಿ ಆಗಿದೆ. ಒಂಬತ್ತು ಮಂದಿ ಗಾಂಜಾ ಸೇವನೆ ಮಾಡಿದ್ದರು ಎನ್ನಲಾಗುತ್ತಿದೆ.

ಮಂಗ್ಲಿಯ ಹುಟ್ಟುಹಬ್ಬದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಕೆಲ ವಿದೇಶಿ ಮದ್ಯಗಳು ಸಹ ಪಾರ್ಟಿ ಸ್ಥಳದಲ್ಲಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬರ್ತ್​ಡೇ ಪಾರ್ಟಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾಯಕಿ ಮಂಗ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳದ ವಿಡಿಯೋ ಮಾಡುತ್ತಿದ್ದ ಪೊಲೀಸರ ಮೇಲೆ ವಾಗ್ದಾಳಿ ನಡೆಸಿದ ಗಾಯಕಿ ಮಂಗ್ಲಿ, ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಧಮ್ಕಿ ಹಾಕಿದ್ದಾರೆ ಎನ್ನಲಾಗುತ್ತಿದೆ.

ಗಾಯಕಿ ಮಂಗ್ಲಿ, ಟಿವಿ ನಿರೂಪಕಿಯಾಗಿ, ಜನಪದ ಹಾಡುಗಳ ಗಾಯಕಿಯಾಗಿ, ಯೂಟ್ಯೂಬ್ ಗಾಯಕಿಯಾಗಿ, ರಿಯಾಲಿಟಿ ಶೋಗಳ ಸ್ಪರ್ಧಿಯಾಗಿ, ನಿರೂಪಕಿಯಾಗಿ ವೃತ್ತಿ ಆರಂಭಿಸಿ ಈಗ ದಕ್ಷಿಣ ಭಾರತದ ಬಲು ಜನಪ್ರಿಯ ಹಾಡುಗಾರ್ತಿಯರಲ್ಲಿ ಒಬ್ಬರಾಗಿದ್ದಾರೆ.

ಕಾಂಗ್ರೆಸ್ ಶಾಸಕರು, ಸಂಸದರ ಮೇಲಿನ ಈ.ಡಿ ದಾಳಿ ಕಾನೂನುಬಾಹಿರ ಎಂದ ಪೊನ್ನಣ್ಣ ..! ಸಿಎಂ ಕಾನೂನು ಸಲಹೆಗಾರರಿಂದ ಸಾಲು-ಸಾಲು ಪ್ರಶ್ನೆ..!

See also  ಹ್ಯಾಟ್ರಿಕ್ ಹೀರೋ ಶಿವಣ್ಣನ ಹೊಸ ಗೆಟಪ್‌ ಹೇಗಿದೆ ನೋಡಿ..!ಸಿನಿಮಾ ಯಾವುದು ಗೊತ್ತಾ?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget