ನ್ಯೂಸ್ ನಾಟೌಟ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ(ಎ.25) ಶ್ರೀನಗರಕ್ಕೆ ಆಗಮಿಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಎಪ್ರಿಲ್ 22ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿಯಾದರು. ಈ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದರು.
ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ರನ್ನೂ ಭೇಟಿಯಾಗಿ ಚರ್ಚಿಸಿದರು.
ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ನಿಂದ ‘ಹೆವಿ ಫೈರಿಂಗ್’..! ಭಾರತದಿಂದ ಪ್ರತಿದಾಳಿ, ಗಡಿಯಲ್ಲಿ ಹೈ ಟೆನ್ಷನ್..!