ನ್ಯೂಸ್ ನಾಟೌಟ್: ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಇಂದು(ಮಾ.25) ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು ಎನ್ನಲಾಗಿದೆ.
ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.
ಸ್ಟೆಡಿ ಸೆಂಟರ್ ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು ಎನ್ನಲಾಗಿದೆ. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.
ಇವರಿಂದ ನಕಲಿ ಅಂಕಪಟ್ಟಿ ಪಡೆದವರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ ಎಂಬುದು ಬಯಲಾಗಿದೆ. ಆರೋಪಿಗಳು 5ರಿಂದ 10 ಸಾವಿರ ರೂಪಾಯಿ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಈ ಮಾದರಿಯ ಅಂಕಪಟ್ಟಿ ಎಲ್ಲಿಯಾದರೂ ಸಲ್ಲಿಕೆಯಾಗಿದ್ದಲ್ಲಿ ಸಿಸಿಬಿಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ರಜತ್, ವಿನಯ್ ಇಂದು(ಮಾ.25) ಮತ್ತೆ ಪೊಲೀಸ್ ವಶಕ್ಕೆ..! ಸಾಕ್ಷ್ಯ ನಾಶದಡಿ ಮತ್ತೆ ಪ್ರಕರಣ ದಾಖಲಾಗುತ್ತಾ..?