ರಾಜ್ಯವೈರಲ್ ನ್ಯೂಸ್ಸಿನಿಮಾ

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ, ಗಂಡ ಕೊಲೆಯಾದಾಗ 5 ತಿಂಗಳ ಗರ್ಭಿಣಿಯಾಗಿದ್ದ ಸಹನಾ

226

ನ್ಯೂಸ್ ನಾಟೌಟ್: ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿಯ ಪತ್ನಿ ಸಹನಾ ಬುಧವಾರ (ಅ.16) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆಯಾಗಿದೆ. ರೇಣುಕಾಸ್ವಾಮಿ ಹತ್ಯೆ ಘಟನೆ ವೇಳೆ 5 ತಿಂಗಳ ಗರ್ಭಿಣಿಯಾಗಿದ್ದ ಸಹನಾ, ಗಂಡನ ಸಾವಿನಿಂದ ಭಾರಿ ಆತಂಕಕ್ಕೀಡಾಗಿದ್ದರು.

ಓರ್ವ ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ರೇಣುಕಾಸ್ವಾಮಿ ಪೋಷಕರಿಗೆ ಮೊಮ್ಮಗನ ಆಗಮನದಿಂದ ಸ್ವಲ್ಪ ಸಮಾಧಾನ ತಂದಿದೆ.
ರೇಣುಕಾಸ್ವಾಮಿ ತಂದೆ ಕಾಶೀನಾಥ್ ಶಿವನಗೌಡ್ರು ಈ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ. ಬೆಳಿಗ್ಗೆ 6.55 ಕ್ಕೆ ಗಂಡು ಮಗುವಿಗೆ ಸಹನ‌ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ. ನಮ್ಮ ಸೊಸೆ ಗಂಡು ಮಗುವಿಗೆ ಜನ್ಮ ನೀಡಿರೋದು ಮಗನೇ ಮರಳಿ ಬಂದಷ್ಟು ಸಂತಸವಾಗಿದೆ ಎಂದು ಭಾವುಕರಾಗಿದ್ದಾರೆ.

See also  ಕುಡಿದ ನಶೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬಂದು ವೈದ್ಯನ ರಂಪಾಟ..! ಆಸ್ಪತ್ರೆಯ ಕಿಟಕಿ ಗಾಜು, ಟೇಬಲ್, ಕುರ್ಚಿಗಳೆಲ್ಲ ಪುಡಿಪುಡಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget