ಕ್ರೈಂದೇಶ-ಪ್ರಪಂಚದೇಶ-ವಿದೇಶ

1 ಲಕ್ಷ ಕೊಟ್ರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ನಂಬಿಸಿ 30 ಕೋಟಿ ರೂ. ವಂಚಿಸಿದ ದಂಪತಿ..! ಏನಿದು ಪ್ರಕರಣ..?

ನ್ಯೂಸ್‌ ನಾಟೌಟ್‌: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು, ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ದಂಪತಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಒಂದು ಆಫೀಸ್ ಮಾಡಿಕೊಂಡು 1 ಲಕ್ಷ ಕೊಟ್ರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click 👇

https://newsnotout.com/2024/05/cinematic-theft-and-viral-video-issue
https://newsnotout.com/2024/05/neonotals-are-nomore-by-fire
https://newsnotout.com/2024/05/kannada-news-pakisthan-quran-issue

Related posts

ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಐಪಿಎಸ್​ ಅಧಿಕಾರಿ ರಸ್ತೆ ಅಪಘಾತದಲ್ಲಿ ಸಾವು..! ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಉಳ್ಳಾಲ ಬೀಚ್ ನಲ್ಲಿ ಮುಳುಗಿ ಮಹಿಳೆ ಸಾವು..! 3 ಮಂದಿಯನ್ನು ರಕ್ಷಿಸಿದ ಸ್ಥಳೀಯರು..!

ಸಾಮಾಜಿಕ ಜಾಲತಾಣದಲ್ಲಿ ಬ್ಲೂ ಟಿಕ್ ಮಾರ್ಕ್ ಕಳೆದುಕೊಂಡ ಪ್ರಜ್ವಲ್ ರೇವಣ್ಣ..! ಇಲ್ಲಿದೆ ಸಂಪೂರ್ಣ ಮಾಹಿತಿ