Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಸುಟ್ಟು ಕರಕಲಾದ ಸ್ಲೀಪರ್‌ ಬಸ್‌..! ಗುರುತೂ ಸಿಗದಂತೆ 5 ಮಂದಿ ಸಜೀವ ದಹನ..!

997

ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಪೀಪರ್‌ ಬಸ್‌ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 5 ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಲಕ್ನೋದ ಮೋಹನ್ ಲಾಲ್ ಗಂಜ್ ಪ್ರದೇಶದ ಕಿಸಾನ್ ಪಥದಲ್ಲಿ ಘಟನೆ ನಡೆದಿದ್ದು, ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ 60 ಪ್ರಯಾಣಿಕರ ಪೈಕಿ ಐವರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಸ್ಲೀಪರ್‌ ಬಸ್‌ ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿತ್ತು. ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ, ಇದು ತಕ್ಷಣಕ್ಕೆ ಪ್ರಯಾಣಿಕರಿಗೆ ಗಮನಕ್ಕೆ ಬಂದಿಲ್ಲ. ಆದರೆ ಇದ್ದಕ್ಕಿದ್ದಂತೆ ಹೊಗೆ ತುಂಬಿಕೊಂಡು ಉಸಿರುಗಟ್ಟಿದ ಅನುಭವವಾಗಿದೆ. ಬಳಿಕ ಒಂದಿಬ್ಬರು ಪ್ರಯಾಣಿಕರು ನೋಡಿದಾಗ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ. ಆತಂಕಗೊಂಡ ಪ್ರಯಾಣಿಕರು ಕಿಟಕಿ ಗಾಜು ಹೊಡೆದು ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಿರುವುದು ನೋಡುತ್ತಿದ್ದಂತೆ ಸುತ್ತಮುತ್ತಲಿನ ಜನ ನೆರವಿಗೆ ಧಾವಿಸಿದ್ದಾರೆ. ಜೊತೆಗೆ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಬಂದ ರಕ್ಷಣಾ ತಂಡ ಬೆಂಕಿ ನಂದಿಸಲು ಹರಸಾಹಸಪಟ್ಟಿತು. ಅಷ್ಟೊತ್ತಿಗೆ ಇಡೀ ಬಸ್ ಸುಟ್ಟು ಹೋಗಿತ್ತು. ಈ ಅಪಘಾತದಲ್ಲಿ 5 ಪ್ರಯಾಣಿಕರು ಸಜೀವ ದಹನವಾಗಿದ್ದು, ಅವರನ್ನು ಇನ್ನೂ ಗುರುತಿಸಲಾಗಿಲ್ಲ. ಇತರ ಪ್ರಯಾಣಿಕರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ.

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳಿಗೆ ದಿಢೀರ್ ಪೊಲೀಸ್ ದಾಳಿ..! 52 ರೌಡಿಶೀಟರ್ ಗಳ ಮನೆ ಪರಿಶೀಲನೆ..!

ಸೇನಾ ಕಾರ್ಯಾಚರಣೆಯಲ್ಲಿ 10 ಉಗ್ರರ ಹತ್ಯೆ..! ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಕ್ಕೆ..!

See also  ಸುಳ್ಯದಲ್ಲಿ ಬೊಲೆರೊ ಮತ್ತು ಈಚರ್ ಗಾಡಿಗಳ ನಡುವೆ ಅಪಘಾತ..! ಪೆರಾಜೆ ಮೂಲದ ಬೊಲೆರೊ ಜಖಂ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget