ಕರಾವಳಿಸುಳ್ಯ

ವಿಜೃಂಭಿಸಿದ ಸುಳ್ಯ ತಾಲೂಕು ಮಟ್ಟದ 27ನೇ ಕನ್ನಡ ಸಾಹಿತ್ಯ ಸಮ್ಮೇಳನ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿಗೆ ಕನ್ನಡ ಕಸ್ತೂರಿ ಪುರಸ್ಕಾರ

195

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ ಯವರಿಗೆ ಆಡಳಿತ ಮತ್ತು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಕನ್ನಡ ಕಸ್ತೂರಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಡಾ. ಲೀಲಾಧರ್ ಡಿ.ವಿ ಯವರು 2005ರಲ್ಲಿ ವೃತ್ತಿ ಜೀವನಕ್ಕೆ ಕಾಲಿರಿಸಿ, ಹಲವಾರು ಹುದ್ದೆಗಳನ್ನು ನಿರ್ವಹಿಸಿ, ಆದರ್ಶಪ್ರಾಯ ಆಡಳಿತಾಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರಸ್ತುತ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

See also  ನವಿಲು ಮೊಟ್ಟೆ ಕದಿಯಲು ಸರಸರನೇ ಮರಕ್ಕೇರಿದ ಯುವತಿ,ಹಾರಿ ಬಂದ ನವಿಲಿನಿಂದ ಯುವತಿಗೆ ಕಾದಿತ್ತು ಆಘಾತ!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget