ಕ್ರೈಂಬೆಂಗಳೂರುಸಿನಿಮಾ

ನಟ ದರ್ಶನ್‌ ಗೆ ಜಾಮೀನು ನೀಡದಂತೆ ಸುಪ್ರೀಂ ಕೋರ್ಟ್‌ಗೆ ಪೊಲೀಸರಿಂದ ಮೇಲ್ಮನವಿ..! ಅಗತ್ಯ ದಾಖಲೆ, ಕಾಗದ ಪತ್ರಗಳನ್ನು ಸಿದ್ಧತೆ

243

ನ್ಯೂಸ್ ನಾಟೌಟ್ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್ ತೂಗುದೀಪಗೆ ಬಿಗ್‌ ಶಾಕ್‌ ನೀಡಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ದರ್ಶನ್‌ ಗೆ ಮಧ್ಯಂತರ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ(ನ.19) ತಿಳಿಸಿದ್ದಾರೆ.

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ನಿಂದ ವೈದ್ಯಕೀಯ ಕಾರಣಗಳಿಗಾಗಿ ಆರು ವಾರಗಳವರೆಗೆ ಮಧ್ಯಂತರ ಜಾಮೀನು ಪಡೆದಿರುವ 47 ವರ್ಷದ ನಟ ದರ್ಶನ್ ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು.

ನಟ ದರ್ಶನ್‌ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅಗತ್ಯ ದಾಖಲೆ, ಕಾಗದ ಪತ್ರಗಳನ್ನು ಸಿದ್ಧಪಡೆಸಿಕೊಳ್ಳಲಾಗುತ್ತಿದೆ. ಮುಖ್ಯವಾಗಿ ಚಾರ್ಜ್‌ಶೀಟ್‌ ಅನ್ನು ಭಾಷಾಂತರ ಮಾಡುವ ಕೆಲಸ ನಡೆದಿದೆ. ಶೀಘ್ರದಲ್ಲಿಯೇ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಜೂನ್ 11ರಂದು ದರ್ಶನ್ ನನ್ನು ಬಂಧಿಸಲಾಗಿತ್ತು.

Click

https://newsnotout.com/2024/11/kannada-news-cinema-director-kannada-news-actor-arrested-serial/
https://newsnotout.com/2024/11/tirupati-tirumala-hindu-temple-kannada-news-1000-above-workers-other-relegious/
https://newsnotout.com/2024/11/75-year-old-lady-r-by-begging-man-kannada-news-d-viral-news-d/
https://newsnotout.com/2024/11/elon-musk-kannada-news-space-x-kannada-news-isro-issue-d/
https://newsnotout.com/2024/11/kannada-news-geethanjali-keerthi-suresh-kananda-news-d-d/
https://newsnotout.com/2024/11/4-month-pregnent-lady-kannada-news-viral-news-nomore-husband/
https://newsnotout.com/2024/11/kukke-subramanya-kannada-news-criketer-surya-kumar-yadhav-d/
See also  ಪ್ರೇಮಿ​ ಜೊತೆ ಗಂಡನೇ ಪತ್ನಿಯ ವಿವಾಹ ಮಾಡಿಸಿಕೊಟ್ಟ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​..! ಮತ್ತೆ ಮೊದಲ ಗಂಡನ ಬಳಿ ಸೇರಿದ ಪತ್ನಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget