ಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯವೈರಲ್ ನ್ಯೂಸ್

ಬಯಲು ಶೌಚಾಲಯಕ್ಕೆ ಹೋದ ಬಾಲಕ ಶವವಾಗಿ ಪತ್ತೆ..! ಗಾರೆ ಕೆಲಸಕ್ಕೆಂದು ದೂರದ ಊರಿನಿಂದ ಬಂದು ನೆಲೆಸಿದ್ದ ತಂದೆ-ತಾಯಿ..!

ನ್ಯೂಸ್ ನಾಟೌಟ್: ಬಯಲು ಶೌಚಕ್ಕೆ ತೆರಳಿದ್ದ ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ನೆರಿಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಬಯಲು ಶೌಚಾಲಯಕ್ಕೆ ಹೋದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಮೇ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಾಣೇಶ್ (15) ಕೊಲೆಯಾಗಿ ಪ್ರಾಣವನ್ನು ಕಳೆದುಕೊಂಡವನು. ಬಯಲು ಶೌಚಾಲಯಕ್ಕೆಂದು ಹೋದವನನ್ನು ಯಾರೋ ಹಂತಕರು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ರಭಸವಾಗಿ ಹೊಡೆದಿರುವುದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಮಗ ಕಾಣದೆ ಇದ್ದಾಗ ಹುಡುಕಾಟ ನಡೆಸಿದಾಗ ಆತನ ಮೃತದೇಹವು ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ಪ್ರಾಣೇಶ್‌ ತಂದೆ, ತಾಯಿ ಕಳೆದ ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಮೂಲತಃ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ ಮಂತ್ರಾಲಯದ ಪ್ರಾಣೇಶ್‌, ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಂದೆ- ತಾಯಿ ಬಳಿ ಬಂದಿದ್ದ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/05/kodagu-rashmika-mandana-narendra-modi-atal-bridge
https://newsnotout.com/2024/05/temple-case-at-chennai-and-issue

   

https://newsnotout.com/2024/05/anjali-nomore-issue-and-accused-arrested

Related posts

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಘೋಷಣೆ, ಬೇಸಿಗೆ ರಜೆ ಯಾವಾಗ..? ಇಲ್ಲಿದೆ ಸಂಪೂರ್ಣ ಮಾಹಿತಿ

ಮೂಡುಬಿದಿರೆ: ತರಗತಿಯೊಳಗೆ ಬಂದು ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿದ ಯುವಕ..! ಆರೋಪಿಯನ್ನು ಬಂಧಿಸಿದ ಪೊಲೀಸರು..!

ಹಿಂದೂ ಧರ್ಮ ಅಪಾಯದಲ್ಲಿಲ್ಲ ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ