Uncategorized

ಅಶ್ಲೀಲ ಮೆಸೇಜ್‌ ಮಾಡಿದ ಶಿಕ್ಷಕನಿಗೆ ವಿದ್ಯಾರ್ಥಿನಿ ಮತ್ತು ಕುಟುಂಬಸ್ಥರಿಂದ ಧರ್ಮದೇಟು..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಯೋರ್ವಳಿಗೆ ಅಶ್ಲೀಲ ಮೆಸೇಜ್‌ ಗಳನ್ನು ಕಳುಹಿಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ ವಿದ್ಯಾರ್ಥಿನಿಯ ಕುಟುಂಬಸ್ಥರು ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಹಿಮಾಚಲ ಪ್ರದೇಶದ ಹಮೀರ್‌ ಪುರ ಎಂಬಲ್ಲಿ ನಡೆದಿದ್ದು, ಆ ಶಿಕ್ಷಕ ವಿದ್ಯಾರ್ಥಿನಿಗೆ ಪದೇ ಪದೇ ಅಶ್ಲೀಲ ಮೆಸೇಜ್‌ ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ಈ ಬಗ್ಗೆ ಮನೆಯವರಿಗೆ ದೂರನ್ನು ನೀಡಿದ್ದಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಏಕಾಏಕಿ ಶಾಲೆಗೆ ನುಗ್ಗಿದ ಆಕೆಯ ಮನೆಯವರು ಎಲ್ಲರ ಎದುರಲ್ಲೇ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು ಅಶ್ಲೀಲ ಮೆಸೇಜ್‌ ಕಳುಹಿಸಿದಂತಹ ಶಿಕ್ಷಕನಿಗೆ ಶಾಲೆಯ ಹೊರಗಡೆ ವಿದ್ಯಾರ್ಥಿಗಳ ಮುಂದೆಯೇ ಚಪ್ಪಲಿ ಸೇವೆ ಮಾಡುವಂತಹ ದೃಶ್ಯವನ್ನು ಕಾಣಬಹುದು.

Related posts

ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ 1,000 ಜನ ಸಾವು..! ಮಲ್ಲಿಕಾರ್ಜುನ ಖರ್ಗೆ ಶಾಕಿಂಗ್ ಹೇಳಿಕೆ..!

ಕೇರಳದ ಮುನ್ನಾಡಿನ ನೆಹರು ಗ್ರಂಥಾಲಯದ ಸಭಾಭವನದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ;ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಕ್ರಮ

ಅಂಗನವಾಡಿ ಕಾರ್ಯಕರ್ತೆಗೆ ಶಿಕ್ಷಕಿ ಸ್ಥಾನ, ಪ್ರಸ್ತಾವನೆ ಸಲ್ಲಿಕೆ