ಕೆವಿಜಿ ಕ್ಯಾಂಪಸ್‌

ಸುಳ್ಯ: ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ

136

ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ. ಎಂ. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ಡಾ. ಮಮತಾ ಕೆ ಕಾಲೇಜಿನ ಬೋಧಕ- ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ‌ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕನ್ನಡದ ಮಹಾನ್ ಕವಿಗಳು ವಿರಚಿತ ಕನ್ನಡದ ಪಂಚ ಗೀತೆಗಳನ್ನು ಗಾಯನ ಮಾಡಿದರು.

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವಿದ್ಯಾರ್ಥಿಗಳ ಉತ್ತಮ ಸಾಧನೆ, ಸ್ನಾತಕೋತ್ತರ ವಿಭಾಗದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ 3 ರ‍್ಯಾಂಕ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget