Uncategorized

ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಕನ್ನಡದಲ್ಲಿ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಟ್ವಿಟ್ ನಲ್ಲಿ ತಿಳಿಸಿದ್ದಾರೆ.

ಸದ್ಯ, ಪ್ರಧಾನಿ ನರೇಂದ್ರ ಮೋದಿಯವರು ಗ್ಲಾಸ್ಗೋದಲ್ಲಿನ ಹವಾಮಾನ ಬದಲಾವಣೆಯ ವಿಶ್ವಸಂಸ್ಥೆಯ ಚೌಕಟ್ಟಿನ (ಯುಎನ್ಎಫ್ ಸಿಸಿಸಿ) 26ನೇ ಕೋಪ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Related posts

‘ದೇಗುಲಕ್ಕೆ ಕನ್ನ ಹಾಕೋದು ಬಿಟ್ಟು ವಿಧಾನಸೌಧದ ಮುಂದೆ ಹುಂಡಿ ಇಟ್ಟು ಬಿಡಿ’ ಹೇಳಿದ್ಯಾಕೆ ಬಿಜೆಪಿ ರಾಜ್ಯಾಧ್ಯಕ್ಷ?ಸಿ.ಎಂ.ಸಿದ್ದು ತಮ್ಮ ಮನೆ ಶೃಂಗಾರಕ್ಕೂ 9 ಕೋಟಿ ನುಂಗಿದ್ದಾರಂತೆ..!

ಸುಳ್ಯ ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ

ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು