ನ್ಯೂಸ್ ನಾಟೌಟ್: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಕಾಂತಾರ’-1 ಸಿನಿಮಾ ಸಹನಟ ಕಪಿಲ್ ( ಮೇ ೬)ಇತ್ತೀಚೆಗೆ ಸಾವನ್ನಪ್ಪಿದ್ದರು. ಈ ಬಗ್ಗೆ ಸಾಕಷ್ಟು ಊಹಾಪೋಹ ಹರಿದಾಡಿತ್ತು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಘಟನೆ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಜೂನಿಯರ್ ಆರ್ಟಿಸ್ಟ್ ಸಾವನ್ನಪ್ಪಿದ ಘಟನೆಗೂ ಚಿತ್ರ ತಂಡಕ್ಕೂ ಯಾವುದೇ ಸಂಬಂಧವಿಲ್ಲ. ಇದು ಚಿತ್ರೀಕರಣದ ವ್ಯಾಪ್ತಿಯ ಹೊರಗೆ ನಡೆದ ಘಟನೆ ಎಂದು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಪ್ರಕಟನೆ ಮೂಲಕ ಸ್ಪಷ್ಟನೆ ನೀಡಿದೆ.
ಕೊಲ್ಲೂರಿನ ಸಮೀಪದ ನದಿಯಲ್ಲಿ ಸ್ನೇಹಿತರ ಜತೆ ಈಜಲು ತೆರಳಿ ‘ಕಾಂತಾರಾ -1 ‘ ಚಿತ್ರದ ಜೂನಿಯರ್ ಆರ್ಟಿಸ್ಟ್ ಕೇರಳದ ಕೊಟ್ಟಾಯಂ ನಿವಾಸಿ ಎಂ.ಎಫ್. ಕಪಿಲ್ ಮೃತಪಟ್ಟಿದ್ದರು.ಈ ಸಂಬಂಧ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಸಾವಿನ ಬಗ್ಗೆ ತನಿಖೆ ಆಗಬೇಕು ಹಾಗೂ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದವು.
ಹೊಂಬಾಳೆ ಫಿಲ್ಮ್ಸ್ ಹೇಳಿದ್ದೇನು?
ಎಂ.ಎಫ್. ಕಪಿಲ್ ಅವರ ನಿಧನಕ್ಕೆ ನಮ್ಮ ಅಗಾಧವಾದ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಅತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ. ಈ ಹಿನ್ನೆಲೆಯಲ್ಲಿ, ಈ ಘಟನೆ ಕಾಂತಾರ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ, ಮತ್ತು ಈ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ, ಚಲನಚಿತ್ರ ಸಂಬಂಧಿತ ಚಟುವಟಿಕೆಗಳ ವ್ಯಾಪ್ತಿಯ ಹೊರಗೆ ಸಂಭವಿಸಿದೆ. ದಯವಿಟ್ಟು ಈ ಘಟನೆಯನ್ನು ಕಾಂತಾರ ಚಿತ್ರ ಅಥವಾ ಅದರ ಸಿಬ್ಬಂದಿಯೊಂದಿಗೆ ಯಾವುದೇ ಸಂಬಂಧವನ್ನು ಕಲ್ಪಿಸಬಾರದು ಎಂದು ನಾವು ವಿನಂತಿಸುತ್ತೇವೆ ಎಂದು ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿಕೊಂಡಿದೆ.